ಕಾರವಾರ: ಜಿಲ್ಲೆಯ ನಾಲ್ಕು ವಿಭಾಗದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ದರೋಡೆ, ಕಳ್ಳತನ ಹಾಗೂ ವಂಚನೆ ಪ್ರಕರಣದಲ್ಲಿ ಕಳ್ಳರಿಂದ ವಶಪಡಿಸಿಕೊಳ್ಳಲಾದ ಸುಮಾರು 75 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಂಬಂಧಪಟ್ಟವರಿಗೆ ಮರಳಿಸುವ ಕಾರ್ಯ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು.
ವಿವಿಧ ಸ್ವತ್ತುಗಳನ್ನು ಮಾಲೀಕರಿಗೆ ವಾಪಸ್ ನೀಡುವ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ವರಿಷ್ಠಾಧಿಖಾರಿ ಸುಮನ್ ಪೆನ್ನೇಕರ್, ಜಿಲ್ಲೆಯಲ್ಲಿ 204 ಪ್ರಕರಣಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ. ಉಳಿದವುಗಳನ್ನು ಶೀಘ್ರದಲ್ಲಿ ಭೇದಿಸುತ್ತೇವೆ. ಜಿಲ್ಲೆಯಲ್ಲಿ ಕಳೆದ ಒಂದು ವ?ದಲ್ಲಿ 18 ಕೊಲೆ ಪ್ರಕರಣ ನಡೆದಿದೆ. ಅದೆಲ್ಲವನ್ನು ಭೇದಿಸಲಾಗಿದೆ. ವಶಕ್ಕೆ ಪಡೆದುಕೊಂಡು ಪ್ರಕರಣಗಳಲ್ಲಿ ಮುಂಡಗೋಡದಲ್ಲಿ ನಡೆದ ದರೋಡೆ ಪ್ರಕರಣ, ಅಸ್ತಿ ಪಂಜರ ದೊರೆತ ಪ್ರಕರಣ ಸಹ ಸೇರಿದೆ ಎಂದರು.
ಈ ವ? ಮುಂಡಗೋಡದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಒಟ್ಟೂ 22.50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 18 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಸುಮಾರು 12 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ. 12 ವಾಹನ ಕಳವು, 21 ಸಾದಾ ಕಳವು ಪ್ರಕರಣಗಳನ್ನೂ ಪತ್ತೆ ಹಚ್ಚಲಾಗಿದೆ.
ಜಿಲ್ಲೆಯಲ್ಲಿ 10 ಬಗೆ ಪ್ರಕರಣಗಳಲ್ಲಿ 08 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 36 ಹಗಲು ಹಾಗೂ ರಾತ್ರಿ ಕಳವು ಪ್ರಕರಣಗಳಲ್ಲಿ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 34 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಪ್ರಸ್ತುತ ವ? ಗೊಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಕನ್ನಾ ಕಳುವಿಗೆ ಸಂಬಂಧಪಟ್ಟಂತೆ 07 ಜನ ಆರೋಪಿತರನ್ನು ದಸ್ತಗಿರಿ ಮಾಡಿ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 18 ಪ್ರಕರಣಗಳನ್ನು ಪತ್ತೆ ಮಾಡಿ, ಸುಮಾರು 12 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಸುಮಾರು 204 ಪ್ರಕರಣಗಳು ದಾಖಲಾಗಿದ್ದು, 97 ಪ್ರಕರಣಗಳನ್ನು ಪತ್ತೆ ಮಾಡಿ, ಅಂದರೆ ಸರಾಸರಿ ಶೇ.50 ರ? ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸ್ವತ್ತು ಪ್ರಕರಣಗಳಲ್ಲಿ ಪತ್ತೆ ಹಚ್ಚಿದ ಪ್ರಕರಣಗಳಲ್ಲಿ ವಾರಸುದಾರರಿಗೆ ವಶಪಡಿಸಿಕೊಂಡ ಸ್ವತ್ತನ್ನು ಮರಳಿಸುವ ಕಾರ್ಯಕ್ರಮ ಸಾಂಕೇತಿಕವಾಗಿ ನಡೆಸಲಾಗುತ್ತಿದ್ದು, ವಾರಸುದಾರರಿಗೆ ಜಿಲ್ಲೆಯ ಬೇರೆ ಬೇರೆ ಸ್ಥಳಗಳಿಂದ ಆಗಮಿಸಲು ತೊಂದರೆ ಆಗುವ ಕಾರಣ ಮುಂದಿನ ದಿನಗಳಲ್ಲಿ ಉಪ ವಿಭಾಗವಾರು ಸ್ವತ್ತನ್ನು ವಾರಸುದಾರರಿಗೆ ಹಿಂತಿರುಗಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದರು.
ಪ್ರಶಂಸಾ ಪತ್ರ ಹಾಗೂ ಬಹುಮಾನ ವಿತರಣೆ:
ಜಿಲ್ಲೆಯಲ್ಲಿ ಕಡತ ನಿರ್ವಹಣೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಪ್ರಶಂಸಾ ಪತ್ರ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಸಿದ್ದಾಪುರ ಪೊಲೀಸ್ ಠಾಣೆಯ ನಾರಾಯಣ ಜೋಗಿ ಮಡಿವಾಳ, ರಾಮಾ ಎಂ. ಕುದ್ರಗಿ, ಕರಬಸಪ್ಪ ಇಂಗಳಸೂರ, ರಮೇಶ ಕೂಡಲ, ಯಶ್ವಂತ ಬೀಳಗಿ, ಮೋಹನ ಗಾವಡಿ ಪೊಲೀಸ್ ವರಿಷ್ಠಾಧಿಕಾರಿಯಿಂದ ಬಹುಮಾನ ಸ್ವೀಕರಿಸಿದರು.
ಭಟ್ಕಳ ತಾಲೂಕಿನ ಮುರುಡೇಶ್ವದ ಬೃಹತ್ ಶಿವನ ವಿಗ್ರಹ ವಿರೂಪಗೊಳಿಸಿದ ಚಿತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಹೊಸದಾಗಿ ಪ್ರಕಟವಾಗಿದ್ದಲ್ಲ. ಅದು ಹಳೆಯ ಚಿತ್ರವಾಗಿದೆ. ಈ ಹಿಂದೆಯೂ ಶೇರ್ ಆಗಿತ್ತು. ಬಳಿಕ ಆ ಖಾತೆ ಬ್ಲಾಕ್ ಆಗಿದೆ. ಪ್ರಸ್ತುತ ಜೂನ್ ತಿಂಗಳಿನಲ್ಲಿ ಮತ್ತೆ ಆ ಪೋಸ್ಟ್ ಶೇರ್ ಆಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ. ಕೆಲವು ವಿ?ಯ ಸೂಕ್ಷ್ಮವಾಗಿದ್ದು, ಸದ್ಯ ಮಾಹಿತಿ ನೀಡುವುದಿಲ್ಲ. ತನಿಖೆ ನಡೆಯುತ್ತಿದೆ. ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. — ಡಾ. ಸುಮನ್ ಪೆನ್ನೇಕರ್ (ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ)