• first
  second
  third
  previous arrow
  next arrow
 • ಉಳ್ವೇಕರ್ ಪರ ಕುಮಟಾದಲ್ಲಿ ಮತಯಾಚಿಸಿದ ಸಚಿವ ಹೆಬ್ಬಾರ್

  300x250 AD

  ಕುಮಟಾ: ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ಮತಕ್ಷೇತ್ರದ ವಿಧಾನಪರಿಷತ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಪ್ರಚಾರ ಸಭೆ ನಡೆಸಿ, ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರ ಪರವಾಗಿ ಮತಯಾಚಿಸಿದರು.

  ಉತ್ತರಕನ್ನಡ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಸರಳ ಸಜ್ಜನ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು.

  300x250 AD

  ಈ ಸಂದರ್ಭದಲ್ಲಿ ಶಾಸಕ ದಿನಕರ ಕೆ ಶೆಟ್ಟಿ, ಮಂಡಲಾಧ್ಯಕ್ಷ ಹೇಮಂತ ಗಾಂವ್ಕರ್, ಪ್ರಮುಖರಾದ ವಿನೋದ ಪ್ರಭು, ಪ್ರಶಾಂತ ನಾಯ್ಕ ಹಾಗೂ ಮಂಡಲದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

  Share This
  300x250 AD
  300x250 AD
  300x250 AD
  Back to top