• first
    second
    third
    previous arrow
    next arrow
  • ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯ ಶೇ.97 ರಷ್ಟು ಫಲಿತಾಂಶ

    300x250 AD

    ಶಿರಸಿ: ಕಳೆದ ಅಕ್ಟೋಬರ 2021 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿದ ಬಿ.ಕಾಂ. ಅಂತಿಮ ವರ್ಷದ (6ನೇ ಸೆಮಿಸ್ಟರ್) ಪರೀಕ್ಷೆಯಲ್ಲಿ ಶಿರಸಿಯ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪರೀಕ್ಷೆಗೆ ಕುಳಿತ ಶೇಕಡಾ ತೊಂಬತ್ತೇಳರಷ್ಟು(97%) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.


    ಪರೀಕ್ಷೆಯಲ್ಲಿ ರಾಧಿಕಾ ಹೆಗಡೆ 95.48% ಅಂಕಗಳಿಸಿ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ, ಗಜಗೌರಿ ಶೆಟ್ಟಿ 95.45% ಅಂಕಗಳಿಸಿ ದ್ವಿತೀಯ ಸ್ಥಾನ ಹಾಗೂ ಶಗುಫಾ ಶೇ 95.24% ಅಂಕಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ. ಪರೀಕ್ಷೆಗೆ ಕುಳಿತ ಒಟ್ಟು 309 ವಿದ್ಯಾರ್ಥಿಗಳಲ್ಲಿ 232 ವಿದ್ಯಾರ್ಥಿಗಳು ಫಸ್ಟಕ್ಲಾಸ್ ವಿತ್ ಡಿಸ್ಟಿಂಕ್ಷನ್, 32 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 36 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತಿರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಂ.ಇ.ಎಸ್. ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ, ಕಾಲೇಜು ಸಮಿತಿಯ ಚೇರಮನ್ ವರೀಂದ್ರ ಕಾಮತ್, ಪ್ರಾಚಾರ್ಯ ಡಾ.ಟಿ.ಎಸ್.ಹಳೆಮನೆ, ಆಡಳಿತ ಮಂಡಳಿಯ ಸದಸ್ಯರು, ಪ್ರಾಧ್ಯಾಪಕರು, ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top