ಹೊನ್ನಾವರ: ಲಯನ್ಸ್ ಕ್ಲಬ್ ಗ್ರಾಮಾಂತರ ಪ್ರದೇಶಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಅದೇ ರೀತಿಯಲ್ಲಿ ಗ್ರಾಮಾಂತರ ಪ್ರದೇಶದ ಬಡ ಜನತೆಯ ಅನುಕೂಲಕ್ಕಾಗಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಂಡಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ ನಾಯ್ಕ ಮಾತನಾಡಿದರು.
ಲಯನ್ಸ್ ಕ್ಲಬ್ ಹೊನ್ನಾವರ ಹಾಗೂ ಕಲಭಾಗಕರ್ ಕಲ್ಯಾಣ ಟ್ರಸ್ಟ್ ಮುಂಬಯಿ ಇದರ ಸಹಯೋಗದೊಂದಿಗೆ ಪಟ್ಟಣದ ಶ್ರೀ ದೇವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಮಾತನಾಡುತ್ತಿದ್ದರು. ಎಲ್ಲ ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆಯುವ ಮೂಲಕ ಮುಂದಿನ ದಿನಗಳಲ್ಲಿ ಇನ್ನೊಬ್ಬರನ್ನು ಅವಲಂಬಿಸದೆ ಬದುಕು ಸಾಗಿಸಲು ಸಹಕಾರಿಯಾಗಲಿ ಎಂದು ನುಡಿದರು.
ಶ್ರೀ ದೇವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೆನೆಜಿಂಗ್ ಡೈರೆಕ್ಟರ್ ಲಯನ್ ಡಾ.ಚಂದ್ರಶೇಖರ ಶೆಟ್ಟಿ ಮಾತನಾಡಿ ಕಣ್ಣು ದೇಹದ ಪ್ರಮುಖ ಅಂಗವಾಗಿದ್ದು, ಅದರ ಬಗ್ಗೆ ಎಲ್ಲರೂ ಕಾಳಜಿವಹಿಸಬೇಕಾಗಿದೆ. ಆರೋಗ್ಯವೆ ಭಾಗ್ಯ ಎಂಬಂತೆ, ಆರೋಗ್ಯಕ್ಕೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳನ್ನು ಲಯನ್ಸ್ ಕ್ಲಬ್ ಹೊನ್ನಾವರ ಸಂಂಘಟಿಸುತ್ತಾ ಬಂದಿದೆ ಎಂದರು. ಈ ಶಿಬಿರದಲ್ಲಿ 200 ಕ್ಕೂ ಅಧಿಕ ಫಲಾನುಭವಿಗಳು ಕಣ್ಣಿನ ತಪಾಸಣೆಗೆ ಒಳಪಟ್ಟು 51 ಫಲಾನುಭವಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕುಮಟಾ ಲಯನ್ ರೇವಣಕರ್ ಚಾರಿಟೇಬಲ್ ಟ್ರಸ್ಟ್ ನ ಆಡಳಿತಾಧಿಕಾರಿ ಜಯದೇವ ಬಳಗಂಡಿ, ಇವೆಂಟ್ ಚೇರ್ ಮನ್ ಲಯನ್ ಡಾ.ಪ್ರಮೋದ್ ಫಾಯ್ದೆ, ಶಿಬಿರದ ವೈದ್ಯಾಧಿಕಾರಿ ಡಾ.ಮಲ್ಲಿಕಾರ್ಜುನ ಸಿ.ಎಸ್, ಕಲಭಾಗಕರ್ ಟ್ರಸ್ಟ್ ನ ಪ್ರತಿನಿಧಿ ಎಮ್.ಜೆ.ಎಫ್ ಲಯನ್ ವಸಂತ ಪ್ರಭು ಮತ್ತಿತರರು ಉಪಸ್ಥಿತರಿದ್ದರು.