ಅಂಕೋಲಾ: ಅಂಕೋಲಾದ ಜಿ.ಸಿ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಂಕೋಲಾ ತಾಲೂಕು ಘಟಕದ ಅಧ್ಯಕ್ಷರ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಡಿ. 12 ರಂದು ಬೆಳಿಗ್ಗೆ 10 ಗಂಟೆಗೆ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಯಂತೆ ಈ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಅಂಕೋಲಾ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಆಜೀವ ಸದಸ್ಯರು, ಹಿರಿ-ಕಿರಿಯ ಸಾಹಿತಿಗಳು ಪಾಲ್ಗೊಂಡು ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.
ನವೆಂಬರ 21 ರಂದು ನಡೆದಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಉತ್ತರಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷನಾಗಿ ಆಯ್ಕೆಯಾಗಲು ಸಹಕರಿಸಿದ ಮತದಾರರಿಗೆ ಸಭೆಯಲ್ಲಿ ಕೃತಜ್ಞತೆ ಸಲ್ಲಿಸುವದಾಗಿಯೂ ತಿಳಿಸಿದ್ದಾರೆ.