ಕುಮಟಾ: ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ಪಟ್ಟಣದ ವನ್ನಳ್ಳಿಯ ಹೆಡ್ ಬಂದರಿನಲ್ಲಿ ಸಂಭವಿಸಿದೆ. ಕುಮಟಾ ತಾಲೂಕಿನ ಅಳ್ವೆಕೋಡಿಯ ನಾಗರಾಜ ಪುರುಷೋತ್ತಮ ಗಾವಡಿ(29) ಮೃತ ವ್ಯಕ್ತಿ.
ಈತ ಕುಮಟಾ ಪಟ್ಟಣದ ವನ್ನಳ್ಳಿಯ ಹೆಡ್ ಬಂದರಿನ ಕಲ್ಲು ಬಂಡೆಯ ಮೇಲೆ ಕುಳಿತು ಮೀನು ಹಿಡಿಯಲು ಗಾಳ ಹಾಕುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಅರಬ್ಬಿ ಸಮುದ್ರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಪಿಎಸ್‌ಐ ರವಿ ಗುಡ್ಡಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ತೆರಳಲಿ ಪರಿಶೀಲನೆ ನಡೆಸಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.