ಹೊನ್ನಾವರ: ತಾಲೂಕಿನ ಹಳದೀಪುರದ ಶ್ರೀ ಮುಖ್ಯಪ್ರಾಣ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಬಳಿ ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸಂಭವಿಸಿದೆ.
ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಲಾರಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ನಿತಿನ್ ನಾಗರಾಜ್ ಶೇಟ್(16) ಇವನಿಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡಿದ್ದನು. ಕೂಡಲೇ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನೆರೆ ಜಿಲ್ಲೆಗೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸುತ್ತಿದ್ದಾಗ ಮಂಕಿ ಸಮೀಪ ಮೃತಪಟ್ಟಿದ್ದಾನೆ.
ದೇವಸ್ಥಾನದ ಕಾರ್ಯಕ್ರಮದ ಹಿನ್ನಲೆ ಹೆದ್ದಾರಿಯಲ್ಲಿ ಟ್ರಾಫಿಕ್ ಸರಿದೂಗಿಸಲು ಏಕಮುಖ ಸಂಚಾರದಲ್ಲಿ ದ್ವಿಮುಖ ಸಂಚಾರಕ್ಕೆ ಅನುವು ಮಾಡಿರುವುದರಿಂದ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಸಂಬಂಧ ಹೊನ್ನಾವರ ಪೆÇಲೀಸ್ ಠಾಣಿಯಲ್ಲಿ ಲಾರಿ ಚಾಲಕ ಬೆಳಗಾವಿ ಸವದತ್ತಿಯ ಶಬ್ಬರ್ ಸಾಬ್ ವಿರುದ್ಧ ಪ್ರಕರಣ ದಾಖಲಾಗಿದೆ.