
EUK ವರದಿ: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೊಳಗಾಗಿದ್ದ ನಟ ಚೇತನ್ ಈಗ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಮಾನನಷ್ಟೆ ಮೊಕದ್ದಮೆ ಕೇಸು ದಾಖಲಿಸಿದ್ದಾರೆ.
ಬ್ರಾಹ್ಮಣ ಸಮಾಜವನ್ನು ಭಯೋತ್ಪಾದಕರಿಗೆ ಹೋಲಿಸಿದ ನಟ ಚೇತನ್ ಅವರ ಹೇಳಿಕೆ ಖಂಡಿಸಿ ಸಚಿವ ಶಿವರಾಮ್ ಹೆಬ್ಬಾರ್ ಟ್ಟೀಟರ್ ನಲ್ಲಿ ಪೋಸ್ಟ್ ಮಾಡಿದ್ದರು.
ಇದರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಚೇತನ್ ತನ್ನ ತೇಜೋವಧೆ ಮಾಡಲಾಗಿದೆ ಎಂದು 1ರೂಪಾಯಿ ಪರಿಹಾರ ನೀಡಬೇಕು ಹಾಗೂ ಬೇಷಾರತ್ ಕ್ಷಮೆ ಯಾಚಿಸಬೇಕೆಂದು ಮೊಕದ್ದಮೆ ದಾಖಲಿಸಿ ಕೋರ್ಟ್ ಮೊರೆ ಹೋಗಿದ್ದಾರೆ. ಈಗಾಗಲೇ ಹಲವು ಕೇಸ್ ಗಳನ್ನು ಎದುರಿಸುತ್ತಿರುವ ನಟ ಚೇತನ್ ಈಗ ಹೆಬ್ಬಾರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಸಿಟಿ ಸಿವಿಲ್ ಕೋರ್ಟ್ ಸಚಿವ ಹೆಬ್ಬಾರ್ ರಿಗೆ ನೋಟೀಸ್ ನೀಡಿದ್ದು ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.