• first
  second
  third
  previous arrow
  next arrow
 • ಡಿ. 13ಕ್ಕೆ ದಿವ್ಯ ಕಾಶಿ-ಭವ್ಯ ಕಾಶಿ ಬೃಹತ್ ಸಮಾವೇಶ

  300x250 AD

  ಕಾರವಾರ: ಡಿ.13ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದಿವ್ಯ ಕಾಶಿ-ಭವ್ಯ ಕಾಶಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.

  ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಕಾಶಿಯಲ್ಲಿ ನಡೆಯಲಿರುವ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ದೇಶಾದ್ಯಂತ 51,000 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

  ಕಾಶಿ ವಿಶ್ವನಾಥ ಧಾಮ್ ಉದ್ಘಾಟನೆಯ ಸಂದರ್ಭದಲ್ಲಿ ರಾಜ್ಯದ ಜನರು ಶಿವನನ್ನು ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಪೂಜಿಸುತ್ತಾರೆ. ಬಿಜೆಪಿ ಪ್ರತಿ ಹಳ್ಳಿ, ಪಟ್ಟಣ ಮತ್ತು ನಗರದಲ್ಲಿ ದೀಪೋತ್ಸವ ಮಾಡಲು ಪ್ರಚಾರ ಮಾಡುತ್ತಿದೆ. ಹಣತೆ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕಾರ್ಯಕ್ರಮದ ಮಾಹಿತಿ ನೀಡಿದರು.
  ಡಿ. 14 ರಂದು ಬಿಜೆಪಿ ಆಡಳಿತ ಇರುವ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಮ್ಮೇಳನ ಸಂಘಟಿಸಲಾಗುವುದು ಎಂದರು.

  300x250 AD

  ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಜೀ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉಪಸ್ಥಿತರಿರುವರು. ಕಾರ್ಯಕ್ರಮವು ತರುಣ್ ಚುಗ್ ಮತ್ತು ಸಹ-ಪ್ರಭಾರಿ ಆಶಿಶ್ ಸೂದ್ ಅವರ ಉಸ್ತುವಾರಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

  ಡಿ. 17 ರಂದು ಮೇಯರ್‍ಗಳ ಸಮ್ಮೇಳನ, ಡಿ. 23ರಂದು ನೈಸರ್ಗಿಕ ಮತ್ತು ಸಾವಯವ ಕೃಷಿಯನ್ನು ಉತ್ತೇಜಿಸಲು ಕಾಶಿಯಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಸ್ವಾಮಿ ವಿವೇಕಾನಂದರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ 2022 ರ ಜ. 12ರಂದು ಕಾಶಿಯಲ್ಲಿ ಯುವ ಸಮಾವೇಶ ನಡೆಯಲಿದೆ ಎಂದರು.


  ಸುದ್ದಿಗೋಷ್ಠಿಯಲ್ಲಿ ವಿಶೇಷ ಆಹ್ವಾನಿತ ಮನೋಜ ಭಟ್, ನಗರಾಧ್ಯಕ್ಷ ನಾಗೇಶ ಕುರ್ಡೇಕರ್, ಗ್ರಾಮೀಣ ಅಧ್ಯಕ್ಷ ಶುಭಾಷ ಗುನಗಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಉದಯ ಬಶೆಟ್ಟಿ, ರೇಷ್ಮಾ ಮಾಳ್ಸೇಕರ್ ಹಾಗೂ ಇನ್ನಿತರರು ಇದ್ದರು.

  Share This
  300x250 AD
  300x250 AD
  300x250 AD
  Back to top