ಭಟ್ಕಳ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ ಅಭ್ಯರ್ಥಿ ಗಣಪತಿ ಉಳ್ವೇಕರ ವಿಜೇತರಾಗಿದ್ದಕ್ಕೆ ಹರ್ಷ ವ್ಯಕ್ತಿಪಡಿಸಿ ಭಟ್ಕಳ ತಾಲೂಕು ಬಿ.ಜೆ.ಪಿ ಘಟಕದ ವತಿಯಿಂದ ಬಿ.ಜೆ.ಪಿ. ಕಾರ್ಯಕರ್ತರು ಮಂಗಳವಾರ ಸಂಜೆ ಇಲ್ಲಿನ ಸಂಶುದ್ದೀನ್ ಸರ್ಕಲ್ ಬಳಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಬಿ.ಜೆ.ಪಿ ತಾಲೂಕು ಘಟಕದ ಅದ್ಯಕ್ಷ ಸುಬ್ರಾಯ ದೇವಾಡಿಗ, ಯುವಮೋರ್ಚಾ ಅಧ್ಯಕ್ಷ ಮಹೇಂದ್ರ ನಾಯ್ಕ, ಪ್ರಮುಖರಾದ ಮೋಹನ ನಾಯ್ಕ, ರಾಜೇಶ ನಾಯ್ಕ, ಭಾಸ್ಕರ ದೈಮನೆ, ಸುರೇಶ ನಾಯ್ಕ, ಸಂತೋಷ ನಾಯ್ಕ, ಲಕ್ಷ್ಮೀನಾರಾಯಣ ನಾಯ್ಕ, ಶ್ರೀಕಾಂತ ನಾಯ್ಕ, ಪಾಂಡುರಂಗ ನಾಯ್ಕ ಮತ್ತಿತರರು ಇದ್ದರು.