ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಶಿರಸಿ ಉಪವಿಭಾಗ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ `ಸೈಬರ್ ಕ್ರೈಮ್’ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಿ.ಎಸ್.ಪಿ ರವಿ ಡಿ. ನಾಯ್ಕ ಮಾತನಾಡಿ ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿದರು.
ಶಶಿಧರ ಪಟಗಾರ ಸೈಬರ್ ತಜ್ಞರು ಮತ್ತು ಸಂಪನ್ಮೂಲ ವ್ಯಕ್ತಿಗಳು, ಸೈಬರ್ ಸೇಫಿಯನ್ಸ್, ಮಂಗಳೂರು ಇವರು ಮಕ್ಕಳ ಜೊತೆ ಸೈಬರ್ ಸೇಪ್ಟಿಯ ಬಗ್ಗೆ ಸಂವಾದ ನಡೆಸಿದರು.
ಸಿ.ಪಿ.ಐ. ಶಿರಾಮಚಂದ್ರ ನಾಯಕ ಪ್ರಾಸ್ತಾವಿಕ ಮಾತನ್ನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಿಕ್ಷಕಿ ಸೀತಾ ಜೋಶಿ ಮಾತನಾಡಿ ವಿದ್ಯಾರ್ಥಿಗಳು ಅನವಶ್ಯಕವಾಗಿ ಮೊಬೈಲ್ ಬಳಸಬಾರದು ಎಂದರು. ಪೊಲೀಸ್ ಸಿಬ್ಬಂದಿ ಸಂತೋಷ ಕಮಟಗೇರಿ ಕಾರ್ಯಕ್ರಮ ನಿರೂಪಿಸಿದರು.
ಶಾಲೆಯ ಶಿಕ್ಷಕ ರಜತ್ ಶೇಟಿಯಾ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯ ಪ್ರಶಾಂತ್ ಭಟ್ಟ ಹಾಗೂ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು