ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು 2,900 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೇಂದ್ರ ಸರಕಾರದ ನೆರವಿನೊಂದಿಗೆ ಮುಂದಿನ ಐದು ವರ್ಷ 2,900 ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಕೇಂದ್ರ ಸರಕಾರದ 15 ನೇ ಹಣಕಾಸು ಯೋಜನೆಯಡಿ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪಕೇಂದ್ರಗಳ ಅಭಿವೃದ್ಧಿಗೆ ವಾರ್ಷಿಕ 555 ಕೋಟಿ ರುಪಾಯಿ ಅನುದಾನ ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮೂಲ ಸೌಕರ್ಯಗಳ ಅಭಿವೃದ್ಧಿ, ಪ್ರಯೋಗಾಲಯ ಸ್ಥಾಪನೆ ಉಪಕರಣಗಳ ಪೂರೈಕೆ ಮುಂತಾದ ಕಾರ್ಯಗಳನ್ನು ಅನುದಾನದಡಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.