• first
  second
  third
  previous arrow
  next arrow
 • ಡಿ.20ಕ್ಕೆ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ

  300x250 AD

  ಯಲ್ಲಾಪುರ: ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ 23 ನೇ ವಾರ್ಷಿಕ ಸರ್ವಸಾಧಾರಣ ಸಭೆ ಡಿ.20 ರಂದು ಮಧ್ಯಾಹ್ನ 3.30 ಕ್ಕೆ ಅಡಿಕೆ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ಹೇಳಿದರು.


  ಅವರು ಗುರುವಾರ ಸಂಘದ ಪ್ರಗತಿ ಕುರಿತು ಪತ್ರಕರ್ತರಿಗೆ ಮಾಹಿತಿ ನೀಡುತ್ತಿದ್ದರು. ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 30.53 ಲಕ್ಷ ರೂ ಲಾಭ ಗಳಿಸಿದೆ. ಆಡಿಟ್ ವರ್ಗೀಕರಣದಲ್ಲಿ ಸಂಘವು ಅ ವರ್ಗದಲ್ಲಿ ಮುಂದುವರಿದಿದೆ. ಕೃಷಿ ಯಂತ್ರೋಪಕರಣಗಳನ್ನು ಸಂಘ ರೈತರಿಗೆ ರಿಯಾಯಿತಿ ದರದಲ್ಲಿ, ಪ್ರೋತ್ಸಾಹಧನದೊಂದಿಗೆ ನೀಡುತ್ತಿದೆ. ರೈತರು ಸಂಘದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದರು.
  ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಸಂಘದಲ್ಲಿ ನಿರಂತರವಾಗಿ ವ್ಯವಹರಿಸುತ್ತಿರುವ ಸಂಘ-ಸಂಸ್ಥೆಗಳ ಪ್ರಮುಖರನ್ನು ಗೌರವಿಸಲಾಗುವುದು ಎಂದರು.

  300x250 AD


  ಉಪಾಧ್ಯಕ್ಷ ಎಂ.ಜಿ.ಭಟ್ಟ ಶೀಗೆಪಾಲ, ನಿರ್ದೇಶಕ ಮಧುಕೇಶ್ವರ ಭಟ್ಟ, ಮುಖ್ಯಕಾರ್ಯನಿರ್ವಾಹಕ ವಿನಾಯಕ ಹೆಗಡೆ ಇದ್ದರು.

  Share This
  300x250 AD
  300x250 AD
  300x250 AD
  Back to top