• first
  second
  third
  previous arrow
  next arrow
 • ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರದಿಂದಿರಿ; ಶಶಿಧರ್ ಪಟಗಾರ

  300x250 AD


  ಶಿರಸಿ: ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ‘ಸೈಬರ್ ಕ್ರೈಮ್’ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಶಶಿಧರ್ ಪಟಗಾರ(ಸೈಬರ್ ಎಕ್ಸ್ಪರ್ಟ್)ಇವರು ವಿದ್ಯಾರ್ಥಿಗಳಿಗೆ ಇಂಟರ್ನೆಟ್, ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸುವುದರ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.


  ಇಂಟರ್ನೆಟ್ ಬಳಸುವಾಗ ಗೊತ್ತಿದ್ದೋ ಗೊತ್ತಿಲ್ಲದೆಯೋ ಕೆಲವೊಂದು ವೈಯಕ್ತಿಕ ಮಾಹಿತಿಗಳು ನಮ್ಮಿಂದ ಕೈ ಜಾರಿದರೆ ಮುಂದೆ ಅದರಿಂದಾಗುವ ಅನಾಹುತಗಳ ಬಗ್ಗೆ, ಅಲ್ಲದೆ ನೆಟ್ ಬ್ಯಾಂಕಿಂಗ್ ಉಪಯೋಗಿಸುವಾಗ ಯಾವ-ಯಾವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ತಿಳಿಸಿಕೊಟ್ಟರು. ಇಂದಿನ ದಿನಮಾನದಲ್ಲಿ 97% ಯುವಜನತೆಯು ಸಾಮಾಜಿಕ ಜಾಲತಾಣ ಮತ್ತು ಇಂಟರ್ನೆಟ್ ಬಳಕೆಯಿಂದ ಸಾಕಷ್ಟು ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇದರ ಮೋಹದಿಂದ ಹೊರಬರಲು ಒದ್ದಾಡುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಈಗಲೇ ಎಚ್ಚೆತ್ತುಕೊಳ್ಳಿ, ಎಂದು ಕರೆ ನೀಡಿದರು.

  300x250 AD


  ಶಿರಸಿಯ ಮಾರ್ಕೆಟ್ ಪೊಲೀಸ್ ಠಾಣೆಯ ಪಿ.ಎಸ್.ಐ. ಭೀಮಶಂಕರ್ ಇವರು ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ಗೀತಾ ಹೆಗಡೆ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು. ಸಹಶಿಕ್ಷಕಿ ಸೀತಾ ಭಟ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಾಗಾರದ ಸಂಪೂರ್ಣ ಪ್ರಯೋಜನ ಪಡೆದರು.

  Share This
  300x250 AD
  300x250 AD
  300x250 AD
  Back to top