
ದಾಂಡೇಲಿ: ತಾಲೂಕಿನ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ಮೊಸಳೆಯೊಂದು ಗ್ರಾಮಕ್ಕೆ ಲಗ್ಗೆ ಇಟ್ಟಿದ್ದು, ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ವೈರಲ್ ಆಗಿದೆ.
ಕಾಳಿ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೊಸಳೆಗಳಿದ್ದು, ಗುರುವಾರ ಬೆಳಿಗ್ಗೆ ಆಹಾರ ಅರಸುತ್ತ ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ಬಂದು ಜನ ಸಂಚಾರ ಪ್ರದೇಶದಲ್ಲಿ ಓಡಾಡುತ್ತಿದೆ. ಮೊಸಳೆ ಕಂಡು ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದ ಮೊಸಳೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ.