• Slide
    Slide
    Slide
    previous arrow
    next arrow
  • ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಜಾತಿ-ಆದಾಯ-ಸಂಧ್ಯಾ ಸುರಕ್ಷಾ ಪ್ರಮಾಣಪತ್ರ ಲಭ್ಯಕ್ಕೆ ಕ್ರಮ; ಸಿಎಂ ಬೊಮ್ಮಾಯಿ

    300x250 AD

    ಹಾವೇರಿ: ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ತಾಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


    ಹಾವೇರಿ ಜಿಲ್ಲೆಯ ಶಿಗ್ಗಾಂವ್‍ನ ಬಿಸನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಗ್ರಾಮೀಣ ಭಾಗದ ಜನರು ಕೆಲವು ಸೇವೆಗಳಿಗಾಗಿ ತಾಲ್ಲೂಕು ಕೇಂದ್ರಕ್ಕೆ ಹೋಗುವುದನ್ನು ತಪ್ಪಿಸುವ ಸಲುವಾಗಿ 2022ರ ಗಣರಾಜ್ಯೋತ್ಸವ ದಿನದಿಂದ ಗ್ರಾಮಪಂಚಾಯಿತಿಗಳಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ನೀಡಲು ಸಿದ್ದತೆ ನಡೆಸಲಾಗಿದ್ದು, ಅದಕ್ಕೆ ಪೂರ್ವಭಾವಿಯಾಗಿ ಇಂಟರ್ನೆಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

    300x250 AD


    ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ 750 ಗ್ರಾಮಪಂಚಾಯ್ತಿಗಳನ್ನು ಅಮೃತ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. 2022ರ ಮಾರ್ಚ್ ವೇಳೆ ಈ ಪಂಚಾಯ್ತಿಗಳಲ್ಲಿ ಶುದ್ದ ಕುಡಿಯುವ ನೀರು, ರಸ್ತೆ, ವಸತಿ ಯೋಜನೆ ಜಾರಿ ಸೇರಿದಂತೆ ಸಮಗ್ರ ಅಭಿವೃದ್ಧಿಯಾಗಬೇಕು. ಅಲ್ಲದೆ 75 ಸಾವಿರ ಗ್ರಾಮೀಣ ಭಾಗದ ಯುವಕರಿಗೆ ಕೌಶಲ್ಯ ತರಬೇತಿ, 7500 ಸ್ತ್ರೀ ಶಕ್ತಿ ಸಂಘಗಳಿಗೆ ಪೆÇ್ರೀತ್ಸಾಹ ಧನ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು

    Share This
    300x250 AD
    300x250 AD
    300x250 AD
    Leaderboard Ad
    Back to top