ಕಾರವಾರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ್ ತಿಳಿಸಿದ್ದಾರೆ.
ಕುಮಟಾ, ಜೊಯಿಡಾ ಮತ್ತು ಮುಂಡಗೋಡದ ಕೆ.ಎಫ್.ಸಿ.ಎಸ್.ಸಿ ಅಕ್ಷರ ದಾಸೋಹ ಮಳಿಗೆ, ಎ.ಪಿ.ಎಂ.ಸಿ ಯಾರ್ಡ್ ಹಾಗೂ ಹಳಿಯಾಳ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಎ.ಪಿ.ಎಂ.ಸಿ ಪ್ರಾಂಗಣ, ಬನವಾಸಿ ರೈತ ಸಂಪರ್ಕ ಕೇಂದ್ರದಲ್ಲಿ ಖರೀದಿಸಲಾಗುವುದು.
ಪ್ರತಿ ಕ್ವಿಂಟಲ್ ಭತ್ತಕ್ಕೆ ಸರ್ಕಾರ ದರ ನಿಗದಿ ಪಡಿಸಿದೆ. ಸಾಮಾನ್ಯ ಭತ್ತವನ್ನು 71,940 ಹಾಗೂ ಗ್ರೇಡ್ ‘ಎ’ ಭತ್ತವನ್ನು 71,960ರಂತೆ ಖರೀದಿಸಲಾಗುವುದು. ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆಯ ನೊಂದಣಿಗೆ ಡಿ.30 ಕೊನೆಯ ದಿನವಾಗಿದೆ ಎಂದು ಅವರು ಹೇಳಿದ್ದಾರೆ.
ಕೃಷಿ ಇಲಾಖೆಯ ‘ಫ್ರೂಟ್ಸ್’ ದತ್ತಾಂಶದಲ್ಲಿ ನೋಂದಣಿ ಮಾಡಿಕೊಂಡಿರುವ ರೈತರು ಮಾತ್ರ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇದರಲ್ಲಿ ನೋಂದಣಿ ಮಾಡಿಸಲು ರೈತರು ಪಹಣಿ ಪತ್ರ, ಆಧಾರ್ ಸಂಖ್ಯೆಯ ನಕಲು ಪ್ರತಿ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ. ಕೋಡ್, ಬ್ಯಾಂಕಿನ ವ್ಯವಸ್ಥಾಪಕರು ದೃಢೀಕರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕದ ಪ್ರತಿ, ಬೆಳೆ ದೃಢೀಕರಣ ಪತ್ರಗಳನ್ನು ಹಾಜರು ಪಡಿಸಬೇಕು. ತಾಲೂಕು ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಲ್ (ಒಂದು ಎಕರೆಗೆ 25 ಕ್ವಿಂಟಲ್ ಲೆಕ್ಕಾಚಾರದಲ್ಲಿ) ಖರೀದಿಸಲಾಗುವುದು. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ದೂರವಾಣಿ 08382-226243, ಮೊಬೈಲ್ ಫೆÇೀನ್: 9482212820 ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.