Slide
Slide
Slide
previous arrow
next arrow

ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ

300x250 AD

ಬೆಳಗಾವಿ: ಮತಾಂತರ ನಿಷೇಧ ಮಸೂದೆಯನ್ನು ಸದನದಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಲು ತೀರ್ಮಾನಿಸಲಾಗಿದೆ.

ವಿಧಾನಸಭೆ ಹಾಗೂ ವಿಧಾನ ಪರಿಷತ್ತಿ ಎರಡರಲ್ಲೂ ನಾಳೆಯೇ ಮತಾಂತರ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದು ಕೂಡ ಸೇರಿದೆ.

300x250 AD

ಪ್ರತಿ ಪಕ್ಷಗಳ ವಿರೋಧದ ನಡುವೆಯೂ ಕಾಯ್ದೆಯನ್ನು ಜಾರಿಗೆ ತರಲು ಬಿಜೆಪಿ ದೃಢ ನಿರ್ಧಾರ ಮಾಡಿದೆ. ವಿಧಾನಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಪರಿಷತ್ತಿನಲ್ಲಿ ಪೂರ್ಣ ಬಹುಮತಕ್ಕೆ ಜೆಡಿಎಸ್ ಸದಸ್ಯರ ಬೆಂಬಲ ಅನಿವಾರ್ಯವಾಗಿದೆ. ಎರಡು ಸದನಗಳಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿಯೇ ಅನುಮೋದಿಸುವುದು ಬಿಜೆಪಿ ಸರ್ಕಾರದ ದೃಢ ನಿರ್ಧಾರವಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ನಾಳೆಯೇ ವಿಧೇಯಕ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top