• Slide
    Slide
    Slide
    previous arrow
    next arrow
  • ಚೆನ್ನಮ್ಮ ಬಾಲಕಿಯರ ವಸತಿ ಶಾಲೆ 19 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

    300x250 AD

    ಜೊಯಿಡಾ: ತಾಲೂಕಿನ ರಾಮನಗರದಲ್ಲಿರುವ ಕಿತ್ತೂರ ಚೆನ್ನಮ್ಮ ಬಾಲಕಿಯರ ವಸತಿ ನಿಲಯದಲ್ಲಿ 19 ವಿದ್ಯಾರ್ಥಿನಿಯರಿಗೆ ಕೊರೊನಾ ದೃಢಪಟ್ಟಿದೆ. ವಸತಿ ನಿಲಯವನ್ನು ‘ನಿರ್ಬಂಧಿತ ವಲಯ’ ಎಂದು ಘೋಷಿಸಲಾಗಿದೆ.


    ಇಲ್ಲಿಗೆ ಸೋಮವಾರ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಸೋಂಕಿತರಿಗೆ ವಸತಿ ನಿಲಯದ ಮೇಲಿನ ಮಹಡಿಯಲ್ಲಿ ಉಳಿದುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

    300x250 AD


    ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಎಲ್ಲ ವಿದ್ಯಾರ್ಥಿಗಳ ಆರ್‍ಟಿ-ಪಿಸಿಆರ್ ಪರೀಕ್ಷೆ ಮಾಡಿಸಬೇಕು. ವಸತಿ ನಿಲಯವನ್ನು ಪ್ರತಿದಿನ ಸ್ಯಾನಿಟೈಸ್ ಮಾಡಬೇಕು. ಸೋಂಕಿತರಿಗೆ ಜೊಯಿಡಾ ತಾಲ್ಲೂಕು ಆಸ್ಪತ್ರೆ ಮತ್ತು ರಾಮನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದು ಸೂಚಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top