ಶಿರಸಿ: ಮನೆಯಿಂದ ಕಾಲೇಜಿಗೆಂದು ಹೊರಟ ವಿದ್ಯಾರ್ಥಿನಿ ನಾಪತ್ತೆ ಪ್ರಕರಣವನ್ನು ಶಿರಸಿ ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 24 ಗಂಟೆಯಲ್ಲಿ ಕಿಡ್ನ್ಯಾಪ್ ಆದ ಬಾಲಕಿಯನ್ನು ರಕ್ಷಿಸಿದ್ದಾರೆ.
ಇತ್ತೀಚಿನ ದಿನದಲ್ಲಿ ಕಾಲೇಜು ವಿದ್ಯಾರ್ಥಿನಿಯರ ಅಪಹರಣ ಪ್ರಕರಣ ಹೆಚ್ಚುತ್ತಿದ್ದು, ಈ ಪ್ರಕರಣ ಸಂಬಂಧ ಬಾಲಕಿಯ ಪಾಲಕರು ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಸಾಗರದಲ್ಲಿ ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಶಿರಸಿ ನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ ಬಾಲಕಿ ರಕ್ಷಣೆ ಮಾಡಿ ಪಾಲಕರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಕಿಡ್ನ್ಯಾಪ್ ಹಾಗೂ ಫೋಕ್ಸೋ ಪ್ರಕರಣ ದಾಖಲಿಸಿದ್ದು, ಪೊಲೀಸ್ ಕಾರ್ಯದ ಬಗ್ಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗುತ್ತಿದೆ.