ಸಿದ್ದಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಶೇಲೂರು ಗ್ರಾಮದಲ್ಲಿ ನಡೆದಿದೆ.
ದತ್ತಾತ್ರೇಯ ನಾಗಾ ನಾಯ್ಕ (50) ಗಂಭೀರ ಗಾಯಗೊಂಡವನಾಗಿದ್ದಾನೆ. ಈತ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿಮಾಡಿ ಗಾಯಗೊಳಿಸಿದೆ. ಗಂಭೀರ ಗಾಯಗೊಂಡ ದತ್ತಾತ್ರೇಯನನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಿದ್ದಾಪುರ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.