ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಎಫ್‍ಡಿಎ ಮತ್ತು ಎಸ್‍ಡಿಎ ಪರೀಕ್ಷೆಗಳಿಗೆ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಈ ಪರೀಕ್ಷೆಗಳನ್ನು ಸೆಪ್ಟೆಂಬರ್ 18 ಮತ್ತು 19 ರಂದು ನಡೆಸಲು ಆಯೋಗ ನಿರ್ಧರಿಸಿದೆ.
ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಆಯೋಗ ಹೊರಡಿಸಿರುವ 29/2/2020 ರ ಅಧಿಸೂಚನೆಯಲ್ಲಿ 2019 ನೇ ಸಾಲಿನ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕೆ ಮೂಲವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಆಯೋಗವು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದೆ.