Slide
Slide
Slide
previous arrow
next arrow

ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ; ಸಿಎಂ ಬೊಮ್ಮಾಯಿ ಘೋಷಣೆ

300x250 AD


ಬೆಂಗಳೂರು: ಬೆಳೆಹಾನಿಗೆ ಸಂಬಂಧಿಸಿದಂತೆ ರೈತರಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಉಂಟಾದ ಬೆಳೆಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮಗಳಡಿ ನೀಡುವ ಪರಿಹಾರಕ್ಕೆ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‍ಗೆ 6800 ರೂಗಳಿಂದ 11500 ವರೆಗೆ ಸೇರಿಸಿ ಬೆಳೆಗಳಿಗೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಬಗ್ಗೆ ಮಾಹಿತಿ ನೀಡಿದ ಅವರು, 12.69 ಲಕ್ಷ ಹೆಕ್ಟೇರ್ ವ್ಯಾಪ್ತಿಯಲ್ಲಿ ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾಗಿರುವ 14 ಲಕ್ಷಕ್ಕೂ ಹೆಚ್ಚು ರೈತರಿಗೆ ಈ ನಿರ್ಧಾರದಿಂದ ಅನುಕೂಲವಾಗಲಿದೆ ಎಂದಿದ್ದಾರೆ.

300x250 AD

ಸರ್ಕಾರಕ್ಕೆ ಈ ನಿರ್ಧಾರದಿಂದ ಸಾವಿರದ ಇನ್ನೂರು ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13

Share This
300x250 AD
300x250 AD
300x250 AD
Back to top