ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್’ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮತೀರ್ಥ ಕ್ರಾಸ್ ಬಳಿ ಬುಧವಾರ ರಾತ್ರಿ ನಡೆದಿದೆ.
ಕುಮಟಾ ಮಾರ್ಗವಾಗಿ ಹೊನ್ನಾವರ ಕಡೆ ಮದುವೆ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವಾಹನದ ಮುಂಭಾಗದ ಗಾಲಿಯು ಸ್ಫೋಟಗೊಂಡ ಪರಿಣಾಮವಾಗಿ ವಾಹನ ನಿಯಂತ್ರಣ ತಪ್ಪಿದೆ ಎನ್ನಲಾಗಿದ್ದು ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೆ ಗುದ್ದಿದ್ದೆ. ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣವನ್ನು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.