ಯಲ್ಲಾಪುರ: ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ, ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಸಂತ್ರಸ್ತರಿಗೆ ಪರಿಹಾರ ಧನ ಹಾಗೂ ಮಾಶಾಸನ ಮಂಜೂರಾತಿ ಪ್ರಮಾಣ ಪತ್ರ ವಿತರಣೆಯನ್ನು ಇಂದು ಪಟ್ಟಣದ ಗಾಂಧಿ ಕುಟೀರದ ಸಭಾಂಗಣದಲ್ಲಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟ 9 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಚೆಕ್ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ 80 ಮಂದಿ ಸಂತ್ರಸ್ತರಿಗೆ, 61 ಜನ ಫಲಾನುಭವಿಗಳಿಗೆ ಮಾಶಾಸನ ಮಂಜೂರಾತಿ ಆದೇಶ ಪತ್ರ ವಿತರಿಸಿದರು.
ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷ ಶ್ಯಾಮಿಲಿ ಪಾಟಣಕರ್, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಜಗದೀಶ ಕಮ್ಮಾರ, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಪ್ರಮುಖರಾದ ವಿಜಯ ಮಿರಾಶಿ, ಕಂದಾಯ ಇಲಾಖೆಯ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.