• Slide
    Slide
    Slide
    previous arrow
    next arrow
  • ಯಲ್ಲಾಪುರದಲ್ಲಿ ಅಂತರ್‌ಜಿಲ್ಲಾ ಕಳ್ಳರ ಬಂಧನ; 2ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ಜಪ್ತಿ

    300x250 AD
    ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ ಪೋಲೀಸರು.

    ಯಲ್ಲಾಪುರ: ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ, ಅವರಿಂದ ಸುಮಾರು 2 ಲಕ್ಷ 20 ಸಾವಿರ ರೂಪಾಯಿ ಮೌಲ್ಯದ 42 ಗ್ರಾಂ ಬಂಗಾರದ ಆಭರಣ ಜಪ್ತಿ ಪಡಿಸಿಕೊಂಡ ಘಟನೆ ಯಲ್ಲಾಪುರದಲ್ಲಿ ಭಾನುವಾರ ನಡೆದಿದೆ.
    ಧಾರವಾಡ ಜಿಲ್ಲೆಯ ಲಕ್ಷ್ಮೀಸಿಂಗನಕೇರಿ ಮೂಲದ ಹುಲಗಪ್ಪ ಹುಲಗೇಶ ಬಂಡಿವಡ್ಡರ (32) ಹಾಗೂ ಇನ್ನೊಬ್ಬ ಅಪ್ರಾಪ್ತನ ಬಂಧನ ಮಾಡಲಾಗಿದ್ದು ಇನ್ನೊಬ್ಬ ಆರೋಪಿಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
    2020 ರ ಡಿಸೆಂಬರ್ ನಲ್ಲಿ ಯಲ್ಲಾಪುರದ ಶಾರದಾ ನಗರದ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಗಳು ಉತ್ತರಕನ್ನಡ ಜಿಲ್ಲೆಯ ಕಾರವಾರ, ಯಲ್ಲಾಪುರ, ಭಟ್ಕಳ, ಸಿದ್ದಾಪುರ, ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ, ಆನವಟ್ಟಿ, ಧಾರವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ, ಕಡೆಗಳಲ್ಲಿ ಮನೆ, ಬ್ಯಾಂಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಯಲ್ಲಾಪುರದ ಸಿಪಿಐ ಸುರೇಶ ಯಳ್ಳೂರ ನೇತೃತ್ವದಲ್ಲಿ ಪಿಎಸ್ ಐಗಳಾದ ಮಂಜುನಾಥ ಗೌಡರ, ಮುಷಾಹಿದ್ ಅಹ್ಮದ್ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top