ಶಿರಸಿ: ರಾಜ್ಯ ಸರಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಿ ನಗರದ ಹಳೇ ಬಸ್ ನಿಲ್ದಾಣದ ಸರ್ಕಲ್ ಬಳಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆಗೆ ಮುಂದಾಗಿದ್ದರು.
ಆದರೆ ಪ್ರತಿಭಟನಾಕಾರರು ಪ್ರತಿಭಟನೆ ಕುರಿತಾಗಿ ಮುಂಚಿತವಾಗಿ ಸಂಬಂಧಪಟ್ಟ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಿಂದ ಒಪ್ಪಿಗೆ ಪತ್ರ ಪಡೆಯದೇ ಏಕಾಏಕಿ ಪ್ರತಿಭಟನೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಪ್ರತಿಭಟನೆಗಳು ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸುವ ಹಂತದಲ್ಲಿ ಪೊಲೀಸರು ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ದೊರಕಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ರಾಜ್ಯದಲ್ಲಿ ಎಸ್.ಡಿ.ಪಿ.ಐ ಸಂಘಟನೆ ನಿಷೇಧಕ್ಕೆ ತೀವ್ರ ಆಗ್ರಹ ನಡೆಯುತ್ತಿರುವ ಸಂದರ್ಭದಲ್ಲಿ ಶಿರಸಿಯಂತಹ ಚಿಕ್ಕ ಊರಿನಲ್ಲಿ ಬೇರೂರುತ್ತಿರುವುದು ಆತಂಕಕಾರಿ ಬೆಳವಣಿಗೆ ಎನ್ನುವುದು ಜನಸಾಮಾನ್ಯರ ಅಭಿಪ್ರಾಯವಾಗಿದೆ.