ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಮತ್ತೆ ನೈಟ್ ಕರ್ಪ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆ ಬಳಿಕ ಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಡಿಸೆಂಬರ್ 28ರಿಂದ ಜ. 6 ರ ವರಗೆ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುವುದು ಎಂದರು.
ಹೊಟೆಲ್, ಪಬ್, ರೆಸಾರ್ಟ್ ಗಳಿಗೆ ಶೇ.50% ಜನರಿಗೆ ಮಾತ್ರ ಅವಕಾಶವಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ ತುಸು ಕಡಿವಾಣ ಬಿದ್ದಂತಿದೆ.