ಭಟ್ಕಳ: ಇಲ್ಲಿನ ಜಾಲಿ ಪಟ್ಟಣ ಪಂಚಾಯಿತಿಗೆ ಇಂದು ಮತದಾನ ನಡೆಯಲಿದ್ದು, ಒಟ್ಟು 13 ಕ್ಷೇತ್ರಗಳಲ್ಲಿ 35 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 20 ವಾರ್ಡ್ ಗಳಿವೆ. 13 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ. ವಾರ್ಡ್ ಸಂಖ್ಯೆ 5, 7, 12, 13, 15, 16, 17 ವಾರ್ಡ್‌ಗಳಲ್ಲಿ ಈಗಾಗಲೇ ಅವಿರೋಧವಾಗಿ ಆಯ್ಕೆ ನಡೆದಿದೆ. ಪಟ್ಟಣದಲ್ಲಿ ಬಿಗಿ ಪೊಲೀಸ್ ಮತದಾನದ ಮಸ್ಟರಿಂಗ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಪಟ್ಟಣದ ಶ್ರೀಗುರು ಸುಧೀಂದ್ರ ಕಾಲೇಜಿನಲ್ಲಿ ನಡೆಯಲಿದೆ. ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ ನಿರ್ಮಿಸಲಾಗಿದ್ದು, 31ರವರೆಗೆ ಅಲ್ಲಿಯೇ ಇವಿಎಂ ಯಂತ್ರಗಳನ್ನು ಪೊಲೀಸ್ ಭದ್ರತೆಯಲ್ಲಿ ಇಡಲಾಗುವುದು ಎಂದು ಚುನಾವಣಾ ಅಧಿಕಾರಿ ಆಗಿರುವ ಬಿಇಒ ದೇವಿದಾಸ ಮೊಗೇರ ತಿಳಿಸಿದ್ದಾರೆ.