ಯಲ್ಲಾಪುರ: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಕಾರ್ಯದರ್ಶಿ ರಾಜುವೇಲ್ ಎ, ಉತ್ತರ ಕನ್ನಡ ಅಥ್ಲೆಟಿಕ್ಸ್ ಅಧ್ಯಕ್ಷರಾದ ಸದಾನಂದ ನಾಯ್ಕ, ಪಟ್ಟಣ ಪಂಚಾಯತ ಅಧ್ಯಕ್ಷ ಸುನಂದಾ ದಾಸ್, ಉಪಾಧ್ಯಕ್ಷ ಶ್ಯಾಮಿಲಿ ಪಾಟಣಕರ್, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವರ್, ಸ್ಥಾಯಿಸಮಿತಿ ಅಧ್ಯಕ್ಷ ಅಮಿತ್ ಅಂಗಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.