Slide
Slide
Slide
previous arrow
next arrow

ಓಮಿಕ್ರಾನ್ ಹೆಚ್ಚಳ; ರಾಜ್ಯದಲ್ಲಿ 7051 ಐಸಿಯು ಬೆಡ್ ಸಿದ್ಧತೆ

300x250 AD

ಬೆಂಗಳೂರು: ದೇಶದಲ್ಲಿ ಕೊರೋನಾ ರೂಪಾಂತರ ಓಮಿಕ್ರಾನ್ ಭೀತಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲೂ ಕೂಡ ಓಮಿಕ್ರಾನ್ ದೊಡ್ಡ ಮಟ್ಟದಲ್ಲಿ ಹರಡುತ್ತಿರುವ ಸೂಚನೆ ಸಿಗುತ್ತಿದೆ. ಹೀಗಾಗಿ ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವರದಿಗಳ ಪ್ರಕಾರ ಓಮಿಕ್ರಾನ್ ಚಿಕಿತ್ಸೆಗೆ 7051 ಐಸಿಯು ಬೆಡ್‍ಗಳನ್ನು ಸಿದ್ಧಪಡಿಸಲಾಗಿದೆ.

ಐಸಿಯು ಬೆಡ್‍ಗಳ ಸಂಖ್ಯೆಯನ್ನು 3680ಯಿಂದ 7051ಕ್ಕೆ ಏರಿಸಲಾಗಿದೆ. 30,000 ಆಕ್ಸಿಜನ್ ಬೆಡ್‍ಗಳನ್ನು ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಅವರು ನಿನ್ನೆ ಓಮಿಕ್ರಾನ್ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

300x250 AD

ಸಭೆ ಬಳಿಕ ಮಾತನಾಡಿದ ಅವರು, “ರಾಜ್ಯದಲ್ಲಿ ಓಮಿಕ್ರಾನ್ ನಿರೀಕ್ಷೆಗೂ ಮೀರಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಸೋಂಕು ತಡೆಯುವ ಕ್ರಮಗಳು, ಚಿಕಿತ್ಸೆ, ಔಷಧಿ ವ್ಯವಸ್ಥೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. 7051 ಐಸಿಯು ಬೆಡ್‍ಗಳನ್ನು ಸಿದ್ಧಪಡಿಸಲಾಗಿದೆ. 30000 ಆಕ್ಸಿಜನ್ ಸಿದ್ದಪಡಿಸಲಾಗಿದೆ, ಔಷಧಿ ವ್ಯವಸ್ಥೆ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

Share This
300x250 AD
300x250 AD
300x250 AD
Back to top