ಕುಮಟಾ: ತೆಂಗಿನಕಾಯಿ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ, ಹಾನಿ ಸಂಭವಿಸಿದ ಘಟನೆ ತಾಲೂಕಿನ ಹಂದಿಗೋಣದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಎರಡು ಸಾವಿರಕ್ಕೂ ಅಧಿಕ ತೆಂಗಿನಕಾಯಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
ರಾತ್ರಿ ವೇಳೆ ಈ ಅವಘಡ ಸಂಭವಿಸಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತೆಂಗಿನಕಾಯಿ ಫ್ಯಾಕ್ಟರಿಯ ಮೇಲ್ಬಾಗದಲ್ಲಿ ವಿದ್ಯುತ್ ತಂತಿ ಹಾದುಹೋಗಿದ್ದು, ವಿದ್ಯುತ್ ಕಿಡಿಬಿದ್ದು, ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ.