• Slide
    Slide
    Slide
    previous arrow
    next arrow
  • ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜಿನಲ್ಲಿ ಜ.1 ರಿಂದ ಸೂರ್ಯ ನಮಸ್ಕಾರ ಕಾರ್ಯಕ್ರಮ

    300x250 AD

    ಬೆಂಗಳೂರು: ಜನವರಿ 1 ರಿಂದ ಫೆಬ್ರವರಿ 7ರವರೆಗೆ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸೂರ್ಯನಮಸ್ಕಾರ ಕಾರ್ಯಕ್ರಮ ಆಯೋಜನೆ ಮಾಡುವಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಯ ಮುಖ್ಯಸ್ಥರಿಗೆ ಪತ್ರವನ್ನು ಬರೆದಿದೆ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಸೂಚನೆಯನ್ನು ಹೊರಡಿಸಿದ್ದು, ಇದರ ಅನ್ವಯ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

    ಜನವರಿ 26ರಂದು ಮ್ಯೂಸಿಕಲ್ ಪರ್ಫಾರ್ಮೆನ್ಸ್ ಆನ್ ಸೂರ್ಯನಮಸ್ಕಾರ ನಡೆಯಲಿದೆ ಎಂದೂ ಹೇಳಲಾಗಿದೆ.

    300x250 AD

    ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಯೋಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಶೈಕ್ಷಣಿಕ ಸಂಸ್ಥೆಗಳಿಂದಲೇ ಯೋಗಕ್ಕೆ ಉತ್ತೇಜಿನ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜನೆಗೆ ಸೂಚನೆ ನೀಡಿದೆ

    Share This
    300x250 AD
    300x250 AD
    300x250 AD
    Leaderboard Ad
    Back to top