• first
    second
    third
    previous arrow
    next arrow
  • ನೆರೆ ಸಂತ್ರಸ್ಥ- ಕೋವಿಡ್’ನಿಂದ ಮೃತರಾದ ಕುಟುಂಬಕ್ಕೆ ಪರಿಹಾರ ಧನದ ಚೆಕ್ ವಿತರಿಸಿದ ಸಚಿವ ಹೆಬ್ಬಾರ್

    300x250 AD

    ಮುಂಡಗೋಡ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಎ.ಪಿ.ಎಮ್.ಸಿ ಸಭಾಂಗಣದಲ್ಲಿ ಕೋವಿಡ್ ನಿಂದ ಮೃತಪಟ್ಟ ರೋಗಿಗಳ ಕುಟುಂಬಸ್ಥರಿಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಧನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಸಚಿವ ಶಿವರಾಮ ಹೆಬ್ಬಾರ್ ಅವರು, ಮುಂಡಗೋಡ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಮೃತಪಟ್ಟ ಸುಮಾರು 34 ಕುಟುಂಬಸ್ಥರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ 89 ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ಅನ್ನು ವಿತರಿಸಿದರು ಹಾಗೂ 200 ಅರ್ಹ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಯೋಜನೆಯ ಬ್ಯಾಂಕ್ ಪಾಸ್ ಬುಕ್ ಅನ್ನು ವಿತರಿಸಿದರು.

    300x250 AD

    ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಪ್ರಮುಖರಾದ ಕೆ.ಸಿ.ಗಲಭಿ, ಉಮೇಶ್ ಬಿಜಾಪುರ, ವೈ.ಪಿ.ಪಾಟೀಲ್, ಗುಡ್ಡಪ್ಪ ಕಾತೂರ, ದೇವು ಪಾಟೀಲ್, ಬಾಬಣ್ಣ ಓಣಿಕೇರಿ ಹಾಗೂ ತಹಶೀಲ್ದಾರ್ ಶ್ರೀಧರ ಮುಂದಲಮನಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Back to top