ದಾoಡೇಲಿ: ನಗರದಲ್ಲಿ ಕೋವಿಡ್ ಸೋಂಕಿತ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡುವವರ ಸಂಖ್ಯೆಯು ಹೆಚ್ಚುತ್ತಿದೆ.
ಹೊರ ರಾಜ್ಯ, ಹೊರ ದೇಶಗಳಿಗೆ ಹೋಗಬೇಕಾದವರಿಗೆ ಕೋವಿಡ್ ಪರೀಕ್ಷಾ ವರದಿ ಕಡ್ಡಾಯವಾಗಿರುವುದರಿಂದ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿರುವ ಕೋವಿಡ್ ಪರೀಕ್ಷಾ ಕೇಂದ್ರಕ್ಕೆ ಹೆಚ್ಚಿನ ಜನರು ಬರ ತೊಡಗಿದ್ದಾರೆ. ಕೋವಿಡ್ ಪರೀಕ್ಷಾ ಕೇಂದ್ರದ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಆರೋಗ್ಯ ಸೇವೆ ನೀಡುತ್ತಿರುವುದಕ್ಕೆ ನಗರದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.