ಮುಂಡಗೋಡ: ಹೊಲಿಗೆ ತರಬೇತಿ ಕ್ಲಾಸಿಗೆ ಪಟ್ಟಣಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ಅಪ್ರಾಪ್ತ ವಯಸ್ಸಿನ ಮಗಳು ಮನೆಗೆ ಬಾರದೆ ಕಾಣೆಯಾದ ಬಗ್ಗೆ ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಟ್ಟಣದ ಕಾಳಗನಕೊಪ್ಪದ ವಿದ್ಯಾರ್ಥಿನಿ ಜುಲೈ 1ರಂದು ಹೊಲಿಗೆ ತರಬೇತಿಯ ಕ್ಲಾಸ್‍ಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಇದು ವರೆಗೂ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ. ಕಾಣೆಯಾದ ಅಪ್ರಾಪ್ತ ವಯಸ್ಸಿನ ಮಗಳನ್ನು ಹುಡುಕಿ ಕೊಡುವಂತೆ ತಾಯಿ ನಂದಾ ಬೆಂಡ್ಲಗಟ್ಟಿ ಅವರು ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.