• first
    second
    third
    Slide
    previous arrow
    next arrow
  • ಗೋದ್ನಾಳ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಗೆ ಸಚಿವ ಹೆಬ್ಬಾರ್ ಚಾಲನೆ

    300x250 AD

    ಮುಂಡಗೋಡು: ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗೋದ್ನಾಳ ಗ್ರಾಮದ ಸಹಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಕಲಿಕಾ ಯೋಜನೆ ಅಡಿಯಲ್ಲಿ ” ಸ್ಮಾರ್ಟ್ ಕ್ಲಾಸ್ ” ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.

     
    ಈ ವೇಳೆ ಮಾತನಾಡಿದ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ದೃಷ್ಟಿಯಿಂದ ಸರಕಾರ ಡಿಜಿಟಲ್ ಕಲಿಕಾ ಯೋಜನೆ ಅಡಿಯಲ್ಲಿ ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಅಳವಡಿಸುತ್ತಿದೆ. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್‌ ಸ್ಮಾರ್ಟ್‌ ಕ್ಲಾಸ್‌ಗಳು ಮಕ್ಕಳ ಭವಿಷ್ಯಕ್ಕೆ ತುಂಬಾ ಸಹಕಾರಿ ಎಂದರು.

    300x250 AD

     
    ಈ ಸಂದರ್ಭದಲ್ಲಿ ಗುಂಜಾವತಿ ಗ್ರಾಮ ಪಂಚಾಯತ ಅಧ್ಯಕ್ಷೆ ಸೀತಾ ಬಾಬು ಏಡಗೆ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ್, ಸ್ಥಳೀಯ ಪ್ರಮುಖರಾದ ದೇವು ಪಾಟೀಲ್,  ಸಿ.ಕೆ.ಅಶೋಕ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಗ್ರಾಮ ಪಂಚಾಯತ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Back to top