ಶಿರಸಿ: ತಾಲೂಕಿನ ಶ್ರೀ ರಾಜರಾಜೇಶ್ವರೀ ವಿದ್ಯಾಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಸುಜಲ್ ರಾಜೇಶ ಸಿರ್ಸಿಕರ ಈತ ಕಲೋತ್ಸವ-2021 ಇನ್ಸ್‌ಸ್ಟ್ರುಮೆಂಟಲ್ ಮ್ಯೂಸಿಕ್ ಕ್ಲಾಸಿಕಲ್ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ.
ಕಲೋತ್ಸವ-2021 ಕಾರ್ಯಕ್ರಮವು ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನಡೆದಿದೆ. ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು , ಶಿಕ್ಷಕ ಶಿಕ್ಷಕಿಯರು, ಪಾಲಕರು ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.