ಯಲ್ಲಾಪುರ: ಜಿಲ್ಲೆಗೆ ಮಂಜೂರಿಯಾಗಿರುವ ‘ಶ್ರಮಿಕ ಸಂಜೀವಿನಿ’ ಸಂಚಾರಿ ಚಿಕಿತ್ಸಾ ಘಟಕಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಡಿ.2 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಯಲ್ಲಾಪುರದ ಕಾರ್ಯಾಲಯದಲ್ಲಿ ಉದ್ಘಾಟಿಸಲಿದ್ದಾರೆ.
ನಂತರ 10.30 ಕ್ಕೆ ಶಾರದಾಗಲ್ಲಿಯಲ್ಲಿ ಕಾರ್ಮಿಕ ಇಲಾಖೆ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದು, ಮಧ್ಯಾಹ್ನ 3.30 ಕ್ಕೆ ಮುಂಡಗೋಡಿನ ಹುನಗುಂದ ಅಂಗನವಾಡಿ ನೂತನ ಕಟ್ಟಡ ಹಾಗೂ ಕಸ ವಿಲೇವಾರಿ ವಾಹನವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.