ಅಂಕೋಲಾ: ತಾಲೂಕಿನ ಸರಕಾರಿ ಪ್ರೌಢಶಾಲೆ ಹಿಲ್ಲೂರಿನ ವಿಜ್ಞಾನ ಶಿಕ್ಷಕರಾದ ಸುಧೀರ ಡಿ ನಾಯಕರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ ರಾಜ್ಯ ಮಟ್ಟದ ಎಚ್‍ಎನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಖ್ಯಾತ ವಿಜ್ಞಾನಿ ಹಾಗೂ ಭಾರತ ಸರ್ಕಾರದ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎ ಎಸ್ ಕಿರಣ ಕುಮಾರ, ಚಿತ್ರದುರ್ಗಾದ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿಗಳಾದ ಬಿ ಪಿ.ವೀರಬದ್ರಪ್ಪ , ಕಾರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷರಾದ ಹುಲಿಕಲ್ ನಟರಾಜ ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನಮಾಡಲಾಯಿತು. ವೈಜ್ಞಾನಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಪೆÇ್ರೀತ್ಸಾಹಿಸಿ ಮಾರ್ಗದರ್ಶನ ಮಾಡಿರುತ್ತಾರೆ , ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿರುವುದು ಇವರ ಸಾಧನೆಗೆ ಸಾಕ್ಷಿಯಾಗಿದೆ. ಇವರಿಗೆ ಈಗಾಗಲೇ ಅನೇಕ ರಾಜ್ಯ ಮಟ್ಟದ ಪ್ರಶಸ್ತಿಗಳು ಲಭಿಸಿದೆ.