ಹೊನ್ನಾವರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಕಿಮಡಿ ಶಿಕ್ಷಕ ಉದಯ ಆರ್.ನಾಯ್ಕ ಇವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಇದರ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಅಧ್ಯಕ್ಷ ಶಂಭು ಲಿಂಗನಗೌಡ ಪಾಟೀಲ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಆದೇಶ ಹೊರಡಿಸಿದ್ದಾರೆ.
ಇವರು ಭಾರತ ಸೇವಾದಳ,ರಾಜ್ಯ ಸರಕಾರಿ ನೌಕರರ ಸಂಘ, ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಹೀಗೆ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡ ಕ್ರಿಯಾಶೀಲ ಶಿಕ್ಷಕರಾಗಿರುತ್ತಾರೆ. ಹೊನ್ನಾವರ ಸರಕಾರಿ ನೌಕರರ ಸಭಾಭವನದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಪ್ರಮಾಣ ಪತ್ರ ನೀಡಿ ಇವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಆನಂದ ಗಾಂವಕರ, ಗೌರವಾಧ್ಯಕ್ಷ ಸುದೀಶ ನಾಯ್ಕ, ತಾಲೂಕ ಅಧ್ಯಕ್ಷ ಎಮ್.ಜಿ.ನಾಯ್ಕ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಆರ್.ಟಿ.ನಾಯ್ಕ, ಜಿಲ್ಲಾ ಉಪಾಧ್ಯಕ್ಷ ರತ್ನಾಕರ ನಾಯ್ಕ, ಜಿಲ್ಲಾ ಮಹಿಳಾ ಉಪಾಧ್ಯಕ್ಷ ಸಾಧನ ಬರ್ಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್.ನಾಯ್ಕ ಹಾಗೂ ಜಿಲ್ಲಾ ಮತ್ತುತಾಲೂಕ ಸಂಘದ ಪದಾಧಿಕಾರಿಗಳು ಮತ್ತುಜಿಲ್ಲಾ ಹಾಗೂ ತಾಲೂಕಾ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು, ಇವರನ್ನು ಅಭಿನಂದಿಸಿ ನೇಮಕಗೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.