• Slide
    Slide
    Slide
    previous arrow
    next arrow
  • ಮಕ್ಕಳ ಕೋವಿಡ್ ಲಸಿಕೆ ಕುರಿತು ಭಯ ಬೇಡ; ಡಾ.ಸುರೇಶ ಹಂಜಗಿ

    300x250 AD

    ಯಲ್ಲಾಪುರ: ರೂಪಾಂತರಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಈ ರೋಗದ ಕುರಿತು ಯಾರೂ ನಿರ್ಲಕ್ಷ ಮಾಡುವಂತಿಲ್ಲ. ಕೋವಿಡ್ ತಡೆಗೆ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದ್ದು ಸಾರ್ವಜನಿಕರು ಸಹಕರಿಸಬೇಕಿದೆ ಎಂದು ವಜ್ರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುರೇಶ ಹಂಜಗಿ ಮನವಿ ಮಾಡಿದರು.


    ಅವರು ಸೋಮವಾರ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊರೊನಾ ವಿರುದ್ಧ ಹೋರಾಡಲು ಅನೇಕರು ದುಡಿಯುತ್ತಿದ್ದಾರೆ. ಆದಷ್ಟು ಬೇಗ ಕೊರೊನಾ ಮುಕ್ತ ಭಾರತ ನಿರ್ಮಾಣದ ಗುರಿ ಹೊಂದಲಾಗಿದೆ. ಇದಕ್ಕಾಗಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿದೆ. ಪಾಲಕರು ಧೈರ್ಯದಿಂದ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಅವರು ಹೇಳಿದರು. ಕೊರೊನಾ ರೋಗ ಹಾಗೂ ಲಸಿಕೆ ಕುರಿತು ಅನೇಕ ವದಂತಿಗಳು ಹಬ್ಬುತ್ತಿದೆ. ಜನರು ವದಂತಿಗಳಿಗೆ ಕಿವಿ ಕೊಡಬಾರದು. ಸರ್ಕಾರದ ಅಧಿಕೃತ ಪ್ರಕಟಣೆಗಳನ್ನು ಮಾತ್ರ ನಂಬಬೇಕು ಎಂದು ಅವರು ತಿಳಿಸಿದರು. ಪ್ರಸ್ತುತ ರೋಗ ಹರಡುವಿಕೆ ತಡೆ ಮುಖ್ಯ ಗುರಿಯಾಗಿದೆ ಎಂದರು.

    300x250 AD


    ಇಡಗುಂದಿ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ರೇಣುಕಾ ಮಂಜುನಾಥ ಪೈಗಣಕರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಾಧಿಕಾರಿಗಳಾದ ಡಾ. ಶಂಕರ್, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ, ಶಾಲೆಯ ಮುಖ್ಯಾಧ್ಯಾಪಕರಾದ ಪ್ರಸನ್ನ ಹೆಗಡೆ ವೇದಿಕೆಯಲ್ಲಿದ್ದರು. ಡಾ.ನವೀನಕುಮಾರ ಎಜಿ ಸ್ವಾಗತಿಸಿ, ವಂದಿಸಿದರು. ಸ್ಥಳದಲ್ಲಿ 64 ವಿದ್ಯಾರ್ಥಿಗಳು ಲಸಿಕೆ ಪಡೆದರು

    Share This
    300x250 AD
    300x250 AD
    300x250 AD
    Leaderboard Ad
    Back to top