• Slide
  Slide
  Slide
  previous arrow
  next arrow
 • ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹ

  300x250 AD

  ಕುಮಟಾ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಕುಮಟಾ ಘಟಕವು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಮಟಾ ಇದರ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಮತ್ತು ಅವರ ವೇತನ ಹೆಚ್ಚಳ ಮಾಡಬೇಕು ಎನ್ನುವ ವಿಷಯವಾಗಿ ಅವರ ಪ್ರತಿಭಟನೆ ನಡೆಯುತ್ತಿದ್ದು, ಈ ಕಾರಣದಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಅವರ ಮನವಿಗೆ ಶೀಘ್ರದಲ್ಲೇ ಸ್ಪಂದಿಸಬೇಕು ಮತ್ತು ತರಗತಿಗಳು ಪುನರಾರಂಭವಾಗುವಂತೆ ಸಹಕರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.

  300x250 AD

  ಈ ಸಂದರ್ಭದಲ್ಲಿ ಸಂಚಾಲಕ ಸಂದೇಶ ನಾಯ್ಕ, ಜಿಲ್ಲಾ ಸಂಚಾಲಕ ಗಜೇಂದ್ರ ಹರಿಕಾಂತ, ಕಾರ್ಯಕರ್ತರಾದ ಸುಜಲ್, ನಿಶಾಂತ, ಜೀತೆಂದ್ರ, ಶ್ರೀಧರ ಸೇರಿದಂತೆ ಇತರರು ಇದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top