• Slide
    Slide
    Slide
    previous arrow
    next arrow
  • ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: 2021 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.


    ಆಸಕ್ತ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳು ನಿರ್ದೇಶಕರು, ಸಲ್ಲಿಸಿದ ಅರ್ಜಿಯೊಂದಿಗೆ, ಕಾಪಿ ರೈಟ್ ಮಾಡಿಸಿರುವ ಪುಸ್ತಕದ ಒಂದು ಪ್ರತಿ ಹಾಗೂ ಡಿಜಿಟಲ್ ಗ್ರಂಥಾಲಯ ಸೇವೆಗೆ ಅನುಕೂಲವಾಗುವಂತೆ ಪುಸ್ತಕದ ಸಾಫ್ಟ್ ಕಾಪಿಯನ್ನು ಸಿಡಿ ರೂಪದಲ್ಲಿ ಫೆ. 5ರ ಸಂಜೆ 5 ಗಂಟೆಯೊಳಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ. ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು- 560001 ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

    300x250 AD


    ಹೆಚ್ಚಿನ ಮಾಹಿತಿಗಾಗಿ www.dpl.karnataka.gov.in ಹಾಗೂ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿ ಅಥವಾ ಕಚೇರಿಯ ದೂರವಾಣಿ ಸಂಖ್ಯೆ 080-22864990 ಅಥವಾ 22867358 ಗೆ ಸಂಪರ್ಕಿಸಬಹುದು ಎಂದು ಉಪನಿರ್ದೇಶಕ (ಹೆ.ಪ್ರ), ಕಾರವಾರ ಜಿಲ್ಲಾ ಕೇಂದ್ರ ಗ್ರಂಥಾಲಯ ಇಲಾಖೆಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top