ಹೊನ್ನಾವರ: ಲಯನ್ಸ್‍ಕ್ಲಬ್ ವತಿಯಿಂದ ಮಹಿಳಾ ಸಬಲೀಕರಣ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಬಳಕೂರಿನಲ್ಲಿ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆ ನಡೆಯಿತು.
ಲಯನ್‍ಕ್ಲಬ್ ಅಧ್ಯಕ್ಷ ವಿನೋದ್ ನಾಯ್ಕ ಮಾತನಾಡಿ ಈ ವರ್ಷ ಹೊನ್ನಾವರ ಲಯನ್ಸ್ ಕ್ಲಬ್ ಗ್ರಾಮಾಂತರ ಪ್ರದೇಶಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಅದೇ ರೀತಿಯಲ್ಲಿ ಇಂದು ಇಲ್ಲಿ ಹೊಲಿಗೆ ತರಬೇತಿ ಕೇಂದ್ರವನ್ನು ಪ್ರಾರಂಭಿಸುತ್ತಿದ್ದೇವೆ. ಇದರ ಪ್ರಯೋಜನವನ್ನು ಈ ಭಾಗದ ಮಹಿಳೆಯರು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ಸಾಗಿಸಲು ಸಹಕಾರಿಯಾಗಲಿ ಎಂದರು.
ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪೈ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೇಶವ ನಾಯ್ಕ, ಗ್ರಾಮ ಪಂಚಾಯತ್ ಸದಸ್ಯ ಗಣಪತಿ ನಾಯ್ಕಬಿ.ಟಿ ಮಾತನಾಡಿದರು. ವೇದಿಕೆಯಲ್ಲಿ ಸ್ವ ಸಹಾಯ ಸಂಘದ ಅಧ್ಯಕ್ಷ ವೀಣಾ ಮಡಿವಾಳ ಉಪಸ್ಥಿತರಿದ್ದರು.