ಶಿರಸಿ: ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಲಾಭಕ್ಕೋಸ್ಕರ ಮಟಕಾ ಆಡಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಇಂದು ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ನಡೆದಿದೆ.
ಪರಶುರಾಮ ಬಂಗಾರಪ್ಪ ಕಬ್ಬೇರ (49) ಎಂಬಾತನೇ ಬಂಧಿತ ಆರೋಪಿ. ಈತ ಜನತಾ ಕಾಲೋನಿಯ ಸಾರ್ವಜನಿಕ ಸ್ಥಳದಲ್ಲಿ ಲಾಭಕ್ಕೋಸ್ಕರ ಮಟಕಾ ಆಡಿಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಯಿಂದ 1660 ರು.ಗಳ ನಗದನ್ನು ಹಾಗು ಮಟಕಾಗೆ ಬಳಸಲಾದ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ.ಎಸ್.ಐ. ಹನುಮಂತ ಬಿರಾದಾರ ತನಿಖೆಯನ್ನು ಕೈಗೊಂಡಿದ್ದಾರೆ.