
ಬೆಂಗಳೂರು: ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿಗಳಿಗೂ ಲಸಿಕೆ ನೀಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇದೇ ತಿಂಗಳ 15 ಮತ್ತು 17 ರಂದು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಅಣುಕು ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅಂತರ ಕಾಪಾಡಿಕೊಳ್ಳಲು ಅನುಕೂಲವಾಗುವಂತೆ ನಿಗಾ ವಹಿಸಬೇಕು. ಅತ್ಯಂತ ಸುರಕ್ಷಿತವಾಗಿ ಈ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರೀಕ್ಷಾ ಕರ್ತವ್ಯ ನಿಭಾಯಿಸಲಿರುವ 95% ಸಿಬ್ಬಂದಿಗಳು ಈಗಾಗಲೇ ಲಸಿಕೆ ಪಡೆದಿದ್ದಾರೆ. ಉಳಿದವರಿಗೆ ಇನ್ನೆರಡು ದಿನಗಳೊಳಗೆ ಲಸಿಕೆ ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮುಂಜಾಗ್ರತೆಯನ್ನು ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.