• first
  second
  third
  Slide
  previous arrow
  next arrow
 • ಕಾರವಾರಕ್ಕೆ 40, ಅಂಕೋಲಾಕ್ಕೆ 10 ಕೋಟಿ ರೂ. ಅನುದಾನ: ರೂಪಾಲಿ ಸಂತಸ

  300x250 AD

  ಕಾರವಾರ: ಅಮೃತ ನಗರೋತ್ಥಾನ ಯೋಜನೆಯಡಿ ಕಾರವಾರ ನಗರಸಭೆಗೆ 40 ಕೋಟಿ ರೂ. ಹಾಗೂ ಅಂಕೋಲಾ ಪುರಸಭೆಗೆ 10 ಕೋಟಿ ರೂ. ಅನುದಾನ ನೀಡಲು ಸರ್ಕಾರ ಅನುಮೋದನೆ ನೀಡಿರುವುದು ಸಂತಸದ ಸಂಗತಿಯಾಗಿದ್ದು, ಇದರಿಂದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.

  ಜಿಲ್ಲಾ ಕೇಂದ್ರವಾದ ಕಾರವಾರ ನಗರಸಭೆ ಹಾಗೂ ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಈ ಅನುದಾನ ಬಳಕೆಯಾಗಲಿದೆ. ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯನ್ನು ನಿವಾರಿಸಲು ನಮ್ಮ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಈ ಅನುದಾನ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ನಮ್ಮೆಲ್ಲರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ್, ಪೌರಾಡಳಿತ ಸಚಿವರಾದ ಎಂಟಿಬಿ ನಾಗರಾಜ ಹಾಗೂ ಈ ಹಿಂದೆ ಹಣ ಬಿಡುಗಡೆ ಪ್ರಕ್ರಿಯೆಗೆ ಚಾಲನೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ರೂಪಾಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top