ಯಲ್ಲಾಪುರ: ಗಿರಿಜನ ಸುರಕ್ಷಾ ವೇದಿಕೆಯ ಆಶ್ರಯದಲ್ಲಿ ಘಟ್ಟದ ಮೇಲಿನ ತಾಲೂಕುಗಳ ಗಿರಿಜನ ಸಮಾವೇಶ ಜ.12 ರಂದು ಬೆಳಗ್ಗೆ 10 ಕ್ಕೆ ಪಟ್ಟಣದ ರೈತ ಭವನದಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ರಾಮು ನಾಯ್ಕ ಹೇಳಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ನಿಯಮಾವಳಿಯ ಪಾಲನೆಯೊಂದಿಗೆ ಸೀಮಿತ ಜನರನ್ನು ಸೇರಿಸಿ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ. ಘಟ್ಟದ ಮೇಲಿನ ತಾಲೂಕುಗಳ ವನವಾಸಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಮತಾಂತರ, ಅತಿಕ್ರಮಣ, ಮೂಲಸೌಕರ್ಯಗಳ ಕೊರತೆ ಸೇರಿದಂತೆ ಗಿರಿಜನರ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿ, ಸರ್ಕಾರದ ಗಮನ ಸೆಳೆಯಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ವಿವಿಧ ಸ್ಥರದ ಜನಪ್ರತಿನಿಧಿಗಳು, ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸಮಾವೇಶದ ಸಂಘಟನೆಯ ಪ್ರಮುಖರಾದ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ದೋಂಡು ಪಾಟೀಲ, ಗೋಪಾಲಕೃಷ್ಣ ಗಾಂವ್ಕಾರ, ಪ್ರಸಾದ ಹೆಗಡೆ, ಬಜ್ಜು ಪಿಂಗಳೆ, ಸಿದ್ದು ಜೋರೆ, ವಿನೋದ ತಳೆಕರ್ ಇತರರಿದ್ದರು.