ಅಂಕೋಲಾ : ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರೇಖಾ ರಾವ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ರೇಖಾ ರಾವ್ ಅವರು ಈ ಮೊದಲು ಮಂಗಳೂರಿನ ಕಾವೂರು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂಬಡ್ತಿ ಹೊಂದಿ ಅಂಕೋಲಾಕ್ಕೆ ವರ್ಗಾವಣೆಗೊಂಡಿದ್ದಾರೆ. ಗಣಿತಶಾಸ್ತ್ರ ವಿಷಯದಲ್ಲಿ ಹಲವು ವರ್ಷಗಳ ಬೋಧನಾ ಅನುಭವ ಹೊಂದಿದ್ದಾರೆ.
ಅಂಕೋಲಾ ಸರಕಾರಿ ಪದವಿ ಪೂರ್ವ ಕಾಲೇಜಿನ ಮೊದಲ ಮಹಿಳಾ ಪ್ರಾಂಶುಪಾಲರಾಗಿ ಅವರು ನಿಯುಕ್ತಿಗೊಂಡಿದ್ದು, ಶುಕ್ರವಾರ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.